ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ 9ರಿಂದ ಮೂರು ದಿನಗಳ ಕಾಲ ಬೆಳಗಾವಿ, ರಾಯಚೂರು, ಬೀದರ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ರಾಜ್ಯದ ಮೂರು ಕ್ಷೇತ್ರಗಳಿಗೆ ಯಾವುದೇ ಕ್ಷಣದಲ್ಲಿ ಉಪಚುನಾವಣೆ ಘೋಷಣೆಯಾಗಬಹುದು ಎಂಬ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಉತ್ತರ ಕರ್ನಾಟಕ ಪ್ರವಾಸ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ.

ಜ.9ರಿಂದ 11ರವರೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಯಚೂರು, ಬೀದರ್ ಹಾಗೂ ಬೆಳಗಾವಿ ಭೇಟಿ ನಿಗದಿಯಾಗಿದೆ ಎಂದು ಹೇಳಲಾಗುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಚುನಾವಣಾ ಆಯೋಗ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನ ಘೋಷಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಭೇಟಿಗೆ ಭಾರಿ ಮಹತ್ವ ಬಂದಿದೆ.