ಸ್ವಯಂ ಪ್ರೇರಣೆಯಿಂದ ಕೊರೋನಾ ಕೋ ವ್ಯಾಕ್ಸಿನ್ ತೆಗೆದುಕೊಳ್ಳುವ ಮೂಲಕ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಗೆ ಮಾದರಿಯಾದ ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಅವರನ್ನು ಬೆಳಗಾವಿಯಲ್ಲಿ ಜೀವನ ರೇಖಾ ಆಸ್ಪತ್ರೆ ವತಿಯಿಂದ ಹಾಗೂ ಕಾರ್ಮಿಕ ಸಂಘಟನೆಗಳಿಂದ ಹೃತ್ಪೂರ್ವಕವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
: ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಸ್ವಯಂ ಪ್ರೇರಣೆಯಿಂದ ಕೊರೋನಾ ಕೋ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಂಕರಗೌಡ ಪಾಟೀಲ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ ವಕೀಲ ಎನ್ ಆರ್ ಲಾತೂರ್ ಮಾತನಾಡಿ, ಹೆಸರಾಂತ ಕಂಪನಿ ಉತ್ಪಾದಿಸಿರುವ ಕೋವ್ಯಾಕ್ಸಿನ್ ಲಸಿಕೆ ಪಡೆಯುವ ಮೂಲಕ ಶಂಕರಗೌಡ ಪಾಟೀಲ ಮಾದರಿಯಾಗಿದ್ದಾರೆ ಎಂದು ಪ್ರಶಂಸಿಸಿದರು.
ಈ ವೇಳೆ ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಮಾತನಾಡಿ, ಕೋ ವ್ಯಾಕ್ಸಿನ್ ಲಸಿಕೆ ಬಳಸಲು ಭಾರತ ಸರ್ಕಾರ ಮತ್ತು ವಿಶ್ವಸಂಸ್ಥೆ ಅನುಮತಿ ನೀಡಿದೆ. ಆದ್ದರಿಂದ ಸಾರ್ವಜನಿಕರು ಹೆದರುವ ಅವಶ್ಯಕತೆ ಇಲ್ಲ. ಬದಲಾಗಿ ಎಚ್ಚರಿಕೆ ವಹಿಸಬೇಕು. ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶಂಕರಗೌಡ ಪಾಟೀಲ್ ಅವರಿಗೆ ಜೀವನ್ ರೇಖಾ ಆಸ್ಪತ್ರೆ ವತಿಯಿಂದ ಪುರಸ್ಕಾರ ಪ್ರಮಾಣಪತ್ರ ನೀಡಲಾಯಿತು.ಜೀವನ್ ರೇಖಾ ಆಸ್ಪತ್ರೆ ವೈದ್ಯರಾದ ಅಮಿತ್ ಭಾತೆ ಈ ವೇಳೆ ಇದ್ದರು.