ಸೈಕ್ಲಿಂಗ್ ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಫಿಟ್ ಮತ್ತು ಆರೋಗ್ಯಕರವಾಗಿರಲು ಉತ್ತಮ ಮಾರ್ಗಗಳಲ್ಲಿ ಒಂದಾಗಿದೆ. ವ್ಯಾಯಾಮವು ವಿದ್ಯಾರ್ಥಿಗಳ ದೈಹಿಕ ಆರೋಗ್ಯದ ಸ್ಥಿತಿಯನ್ನು ಹೆಚ್ಚಿಸಲು ಸಹಾಯ ಮಾಡಿ ಮಾನಸಿಕ ಆರೋಗ್ಯವನ್ನೂ ಉತ್ತೇಜಿಸುತ್ತದೆಎಂದು ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ.ಸ್ಪೂರ್ತಿ ಪಾಟೀಲ ತಿಳಿಸಿದರು.
ಅವರು ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ “ಫಿಟ್ಇಂಡಿಯಾ ಸೈಕ್ಲೋಥಾನ್-2020” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಪ್ರೊ. ಸಂಗೀತಾ ದೇಸಾಯಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ “ಫಿಟ್ಇಂಡಿಯಾ ಸೈಕ್ಲೋಥಾನ್” ಆಂದೋಲನ್ದ ಸೈಕ್ಲಿಂಗ್ ಕ್ರೀಡೆಯು ವಿದ್ಯಾರ್ಥಿಗಳಿಗೆ ಅವಶ್ಯಕವಿದ್ದು, ಅದು ಒಳ್ಳೆಯ ಮನೋಭಾವ, ಉತ್ತಮ ಆರೋಗ್ಯವನ್ನು ಕಾಪಾಡುತ್ತದೆ. ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಬೇಕು ಹಾಗೂ ಪ್ರಧಾನ ಮಂತ್ರಿಯವರ “ಫಿಟ್ಇಂಡಿಯಾ ಸೈಕ್ಲೋಥಾನ್” ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ರಾಜು ಜೋಶಿ, ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಆನಂದ ದೇಶಪಾಂಡೆ, ದೈಹಿಕ ಉಪನ್ಯಾಸಕರಾದ ವಿಶಾಂತ ದಾಮೋನೆ, ಮಹಾದೇವ ಶಿರಗಾಂವಕಾರ, ಪಿಯುಸಿ ವಾಣಿಜ್ಯ ವಿಭಾಗದ ಸಂಯೋಜಕ ಪ್ರೊ. ನಾಗೇಶ್ವರಡೆಮಿನಕೊಪ್ಪ, ಪಿಯುಸಿ ವಿಜ್ಞಾನ ವಿಭಾಗದ ಸಂಯೋಜಕ ಡಾ.ಶಣ್ಮೂಕ ಕುಚಬಾಳ, ಪಿಯುಸಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಉಮೇಶ ಕಾಳೆ, ಪಿಯುಸಿ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಶಿವಪ್ರಸಾದ ಭಗವಂತನವರ, ಬಿ.ಕಾಂ. ಪದವಿ ವಿಭಾಗದ ಮುಖ್ಯಸ್ಥೆ ಪ್ರೊ.ಭಾರತಿ ಎಸ್.ಬಿ., ಬಿ.ಎಸ್ಸಿ. ಪದವಿ ವಿಭಾಗದ ಮುಖ್ಯಸ್ಥ ಪ್ರೊ. ನಿಂಗಪ್ಪಾ ಸಬರದ, ಎಂ.ಕಾಂ. ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ. ಸಂಜೀವಕುಮಾರಮಠ, ಅಂಗಡಿವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.