ಡ್ರಗ್ಸ್ ದಂಧೆ ಒಳಗೊಂಡು ಹಲವು ಅಪರಾಧ ಕೃತ್ಯಗಳನ್ನು ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊತ್ತಿಕೊಳ್ಳದಿದ್ದರೆ ಸಂಬಂಧಿಸಿದ ಪೆÇಲೀಸ್ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಎಚ್ಚರಿಕೆ ನೀಡಿದರು.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಮಂಗಳವಾರ ಸಭೆ ನಡೆಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಮಾತನಾಡಿ, ಡ್ರಗ್ಸ್ ದಂಧೆ ಸೇರಿದಂತೆ ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವವರನ್ನು ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ಪ್ರಸ್ತಾವನೆ ಕಳುಹಿಸಲಾಗಿದೆ. ಅಂತಹ ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಇದರಲ್ಲಿ ಲೋಪಗಳಾದರೆ ಪೆÇಲೀಸ್ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ತಪ್ಪು ಕಂಡುಬಂದರೆ ಯಾರನ್ನೂ ಬಿಡುವುದಿಲ್ಲ. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಾಹನ ದಟ್ಟಣೆ ರಾಜ್ಯದ ಎಲ್ಲ ಮಹಾನಗರಗಳಲ್ಲಿರುವ ಸಮಸ್ಯೆಯಾಗಿದೆ. ಪೆÇಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಕೆಲವು ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಲಾಗಿದೆ. ಟ್ರಾಫಿಕ್ ಸಮಸ್ಯೆ ಇರುವ ಕಡೆ ಪ್ಲಾನ್ ಮಾಡಿಕೊಂಡು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಪೊಲೀಸ್ ಇಲಾಖೆಯಲ್ಲಿ ಇದೇ ವರ್ಷ 10 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರತಾಪ್ ರೆಡ್ಡಿ ಮಾಹಿತಿ ನೀಡಿದರು.
ಬೆಳಗಾವಿ ಪೆÇಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮೆರಾ ಬಂದ್ ಆಗಿರುವುದು ಗಮನಕ್ಕೆ ಬಂದಿಲ್ಲ. ಸಿಸಿ ಕ್ಯಾಮೆರಾ ಸೇರಿ ಅವ್ಯವಸ್ಥೆ ಸರಿಪಡಿಸುವ ಕೆಲಸ ನಡೆಯಲಿದೆ ಎಂದರು.
ಈ ವೇಳೆ ಐಜಿಪಿ ರಾಘವೇಂದ್ರ ಸುಹಾಸ್, ಪೊಲೀಸ್ ಆಯುಕ್ತ ಡಾ.ತ್ಯಾಗರಾಜನ್, ಜಿಲ್ಲಾ ಪೊಲೀಸ್ ವರಿಷ್ಠ ಲಕ್ಷ್ಮಣ ನಿಂಬರಗಿ, ಡಿಸಿಪಿ ವಿಕ್ರಮ ಆಮ್ಟೆ ಮತ್ತಿತರರು ಇದ್ದರು.