ದಕ್ಷ ಪೊಲೀಸ್ ಅಧಿಕಾರಿಗಳಾದ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಹಾಗೂ ಬೆಳಗಾವಿ ಪೊಲೀಸ್ ವರಿಷ್ಠಾ ಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಮುಖ್ಯಮಂತ್ರಿ ಪದಕ ದೊರೆತಿದೆ.
ಬೆಳಗಾವಿ ಜಿಲ್ಲೆಯಂತಹ ಅತೀ ದೊಡ್ಡ ಜಿಲ್ಲೆಯಲ್ಲಿ ದಕ್ಷ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಹಾಗೂ ಬೆಳಗಾವಿ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರಿಗೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
ಈ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಅಪರಾಧ ಲೋಕದ ಪಾಪಿಗಳಿಗೆ ಸಿಂಹಸ್ವಪ್ನರಾಗಿ ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಪದಕ ಪ್ರಶಸ್ತಿ ಇವರನ್ನು ಅರಸಿ ಬಂದಿದೆ. ಅದೇ ರೀತಿ ರಾಜ್ಯದ 121 ಪೊಲೀಸ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೂ ಮುಖ್ಯಮಂತ್ರಿ ಪದಕ ದೊರೆತಿದೆ.