Uncategorized

ಕೊವಿಡ್ ಲಸಿಕೆಗಳಿಗೆ ಡಿಸಿಜಿಐ ಅನುಮತಿ: ಪ್ರಧಾನಿ ನರೇಂದ್ರ ಮೋದಿ ಹರ್ಷ

Share

ಸ್ವದೇಶಿ ನಿರ್ಮಿತ ಎರಡು ಕೊವಿಡ್ ಲಸಿಕೆಗಳಿಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದೆ. ಇದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆಪಡುವ ಕ್ಷಣವಾಗಿದೆ, ಆತ್ಮನಿರ್ಭರ ಭಾರತದ ಪ್ರತಿಫಲ ದೊರೆಯಲಾರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.

The Governor of Nagaland, Shri R.N. Ravi calling on the Prime Minister, Shri Narendra Modi, in New Delhi on August 08, 2019.ಆಕ್ಸ್ ಫರ್ಡ್- ಆಸ್ಟ್ರಾಜನಿಕಾ ಕೊವಿಡ್ ಲಸಿಕೆ ಹಾಗೂ ಹೈದರಾಬಾದ್ ನ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಲಸಿಕೆಗಳ ಸಾರ್ವತ್ರಿಕ ಬಳಕೆಗೆ ಅನುಮತಿ ನೀಡಿರುವ ಡಿಸಿಜಿಐ, ಶೀಘ್ರದಲ್ಲಿಯೇ ಈ ಲಸಿಕೆಗಳ ಹಂಚಿಕೆ ಆರಂಭಿಸಲು ಒಪ್ಪಿಗೆ ಸೂಚಿಸಿದೆ. ಲಸಿಕೆಗಳನ್ನು ತುರ್ತು ಸಂದರ್ಭದಲ್ಲಿ ಮಾತ್ರ ಬಳಕೆ ಮಾಡಬಹುದು ಎಂದು ತಿಳಿಸಿದೆ.

ಎರಡು ಕೊವಿಡ್ ಲಸಿಕೆಗಳಿಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮತಿ ನೀಡಿದ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶವಾಸಿಗಳು ಬಹುದಿನಗಳಿಂದ ಕಾತರದಿಂದ ಕಾಯುತ್ತಿದ್ದ ಕ್ಷಣ ಈಗ ಒದಗಿ ಬಂದಿದೆ. ಈ ಲಸಿಕೆಯ ಲಭ್ಯತೆಗಾಗಿ ಶ್ರಮಿಸಿರುವ ನಮ್ಮ ಹೆಮ್ಮೆಯ ವಿಜ್ಞಾನಿಗಳ ಶ್ರಮವನ್ನು ದೇಶ ಸದಾ ಸ್ಮರಿಸುತ್ತದೆ ಎಂದು ಹೇಳಿದ್ದಾರೆ.

Tags:

error: Content is protected !!