ಬೆಳಗಾವಿಯಲ್ಲಿ ಜನವರಿ 17ರಂದು ಜನಸೇವಕ ಸಮಾವೇಶ ನಡೆಯಲಿದ್ದು, ಇದರಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡ ತಿಳಿಸಿದರು.
ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪರ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲ್ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಅಭಿನಂದಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಗಾವಿಯಲ್ಲಿ ಜನವರಿ 17ರಂದು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಇದರಲ್ಲಿ ಬಿಜೆಪಿ ವರಿಷ್ಠ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಯಲ್ಲಿ ಆಯೋಜಿಸಿರುವ ಜನಸೇವಕ ಸಮಾವೇಶದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ ತಿಳಿಸಿದರು.
ಒಟ್ಟಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮೂಲಕ ರಾಜಕೀಯ ಅಖಾಡಕ್ಕೆ ಧುಮುಕಿರುವ ಸದಸ್ಯರು ಕೇಂದ್ರ ಸಚಿವ ಬಿಜೆಪಿ ವರಿಷ್ಠ ಅಮಿತ್ ಶಾ ಅವರನ್ನು ಪ್ರತ್ಯಕ್ಷವಾಗಿ ಕಂಡು ಅವರ ಭಾಷಣವನ್ನು ಕೇಳಲು ಚಿಕ್ಕೋಡಿ ಭಾಗದ ಗ್ರಾಮ ಪಂಚಾಯತ ಸದಸ್ಯರು ಕಾತುರತೆಯಿಂದ ಕಾಯುತ್ತಿದ್ದಾರೆ.