ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರು ಏನು ಸುದ್ದಿ ತರುತ್ತಾರೆ ಎಂಬುದನ್ನು ಕಾಯ್ದು ನೋಡೋಣ ಎಂದು ಹೇಳುವ ಮೂಲಕ ಸಿಎಂ ಬಿಎಸ್‍ವೈ ಸಚಿವ ಸ್ಥಾನದ ಆಕಾಂಕ್ಷಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಗಣೇಶನ ಮದುವೆ ಎಂಬಂತಾಗಿದೆ. ಆವಾಗ ಆಗುತ್ತೆ..ಈವಾಗ ಆಗುತ್ತೆ ಎಂದು ಬರೀ ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಹೇಳಿಕೊಂಡೆ ಬರುತ್ತಿದ್ದಾರೆ. ಆದರೆ ಸಂಪುಟ ವಿಸ್ತರಣೆಗೆ ಮಾತ್ರ ಮುಹೂರ್ತ ಕೂಡಿ ಬರುತ್ತಿಲ್ಲ. ಈ ಸಂಬಂಧ ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬಿಎಸ್‍ವೈ ಬಿಜೆಪಿ ರಾಜ್ಯ ಉಸ್ತುವಾರಿ ಆಗಿರುವ ಅರುಣಸಿಂಗ್ ರಾಜ್ಯಕ್ಕೆ ಶನಿವಾರ ಆಗಮಿಸಲಿದ್ದು, ಅವರು ಏನು ಸುದ್ದಿ ತರುತ್ತಾರೆ ಎಂದು ಕಾದು ನೋಡೋಣ ಎಂದಿದ್ದಾರೆ.
ಒಟ್ಟಾರೆ ಸಂಪುಟ ವಿಸ್ತರಣೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಜನರು ಆಕಾಂಕ್ಷಿಗಳು ತೀವ್ರ ನಿರಾಸೆಗೆ ಒಳಗಾಗಿದ್ದಾರೆ. ಹೀಗಾಗಿ ಹೈಕಮಾಂಡ್ ಶೀಘ್ರವೇ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಲಿದೆ ಎಂಬ ಮಾತು ರಾಜ್ಯ ರಾಜಕೀಯದಲ್ಲಿ ಕೇಳಿ ಬರುತ್ತಿದೆ.