ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳಿಗೆ ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೃಣಾಲ್ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಚಾಲನೆ ನೀಡಿದರು.
ಶಾಸಕರ ನಿಧಿಯಿಂದ 4 ಲಕ್ಷ ರೂ.ಗಳ ಚೆಕ್ ನ್ನು ದೇವಸ್ಥಾನದ ಕಮೀಟಿಯವರಿಗೆ ಹಸ್ತಾಂತರಿಸಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಅನುಪಸ್ಥಿತಿಯಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಮೋಹನ ಸಾಂಬ್ರೆಕರ್, ಮೀನಾಕ್ಷಿ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.