National

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ..ಇತ್ಯರ್ಥವಾದ ವಿಷಯ ಕೆಣಕಲು ಬರಬೇಡಿ..ಉದ್ಧವ್ ಠಾಕ್ರೆಗೆ ಸಿದ್ದರಾಮಯ್ಯ ಎಚ್ಚರಿಕೆ

Share

ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಉದ್ಧವ್ ಠಾಕ್ರೆಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್ ಮೂಲಕ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಎಚ್ಚರಿಕೆಯ ಸಂದೇಶ ರವಾನಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ. ಕರ್ನಾಟಕದ ನೆಲ-ಜಲ-ಭಾμÉಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಸಿಎಂ ಅವರ ಉದ್ಧಟತನದ ಹೇಳಿಕೆಗೆ ಕರ್ನಾಟಕ ಸಿಎಂ ಯಡಿಯೂರಪ್ಪನವರು ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.

 

Tags:

error: Content is protected !!