ಬೆಳಗಾವಿಯ ಐತಿಹಾಸಿಕ ಕೋಟೆ ಕೆರೆಯಲ್ಲಿ ಗುರುವಾರ ಮಧ್ಯಾಹ್ನ ಶವವಾಗಿ ಪತ್ತೆಯಾದ ವ್ಯಕ್ತಿಯ ಗುರುತು ಬಹಿರಂಗವಾಗಿದೆ. ಮೃತ ವ್ಯಕ್ತಿಯನ್ನು ಬೆಳಗಾವಿ ಆಝಾದ್ ನಗರದ ಅಫ್ಜಲ್ ಖಾನ್ ಎಂದು ಗುರುತಿಸಲಾಗಿದೆ.
: ಹೌದು ಗುರುವಾರ ಮಧ್ಯಾಹ್ನ ಬೆಳಗಾವಿ ಕೋಟೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಾರ್ಕೆಟ್ ಠಾಣೆ ಪೊಲೀಸರು ಶವವನ್ನು ಕೆರೆಯಿಂದ ಹೊರಗೆ ತೆಗೆದಿದ್ದರು. ಶವದ ಕುರಿತು ಮಾಹಿತಿ ಸಂಗ್ರಹಿಸಲು ತನಿಖೆ ಕೈಗೊಂಡರು. ಆದರೆ ಈತ ಆಝಾದ್ ನಗರದ ಮನೆಯಿಂದ ಜನವರಿ 5ರಂದು ಕಾಣೆಯಾಗಿದ್ದ ಎಂಬ ಮಾಹಿತಿ ಗೊತ್ತಾಗಿದೆ.
ಸಾವಿಗೆ ನಿಖರ ಕಾರಣ ಕೂಡ ತಿಳಿದು ಬಂದಿಲ್ಲ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.