Hukkeri

ಸಾರ್ವಜನಿಕರ ಅಹವಾಲು ಆಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

Share

ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್‍ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಗುರುವಾರ ಸತೀಶ ಜಾರಕಿಹೊಳಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಶೇ.70ರಿಂದ ಶೇ.80ರಷ್ಟು ಸಿಸಿ ರಸ್ತೆ ಕಾಮಗಾರಿ ಈಗಾಗಲೇ ನಿರ್ಮಿಸಿದ್ದೇವೆ. ಬರುವ ಒಂದು ವರ್ಷದಲ್ಲಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು. ಇನ್ನು ಕ್ಷೇತ್ರದ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದೇವೆ ಎಂದು ಇದೇ ವೇಳೆ ಸತೀಶ ಜಾರಕಿಹೊಳಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, ಸುನೀಲ್ ಹುಕ್ಕೇರಿ, ಮುಂತಾದವರು ಇದ್ದರು.

ಅದೇ ರೀತಿ ಶಾಸಕ ಸತೀಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದ ಯಮಕನಮರಡಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ, ವಾರ್ಡಗಳಲ್ಲಿ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಯಮಕನಮರಡಿ ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರು ಅಭಿವೃದ್ದಿ ಪರ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮದ ಶ್ರೆಯೋಭಿವೃದ್ಧಿಗೆ ಶ್ರಮಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಗ್ರಾಮ ಪಂಚಾಯಿತಿ ನೂತನ ಸದಸ್ಯರು, ಗ್ರಾಮ ಮುಖಂಡರು ಇದ್ದರು.

Tags:

error: Content is protected !!