ಕೇಂದ್ರ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚೆ ಮಾಡಿದ್ದೇನೆ. ಇಂದಿನ ಸಭೆ ಸಂಪೂರ್ಣವಾಗಿ ತೃಪ್ತಿ ತಂದಿದೆ. ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಹಿ ಸುದ್ದಿ ನೀಡುವುದಾಗಿ ಹೈಕಮಾಂಡ್ ತಿಳಿಸಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಿಎಸ್‍ವೈ ಗ್ರಾಮ ಪಂಚಾಯ್ತಿ ಚುನಾವಣೆ ಫಲಿತಾಂಶ ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೆಲ್ಲರಿಗೂ ಖುಷಿ ತಂದಿದೆ. ಬರುವ ಲೋಕಸಭಾ ಮತ್ತು ವಿಧಾನಸಭಾ ಉಪ ಚುನಾವಣೆಗೆ ಮೂರು ಸೀಟ್ ಕಳಿಸಿಕೊಡಿ ಅಂದಿದ್ದಾರೆ. ಅದಷ್ಟು ಬೇಗ ಆ ಕಾರ್ಯ ಮಾಡುವುದಾಗಿ ತಿಳಿಸಿದರು.
ಇನ್ನೂ ನೀವೆಲ್ಲಾ ಕಾತುರದಿಂದ ಕಾಯ್ತಾ ಇರೋದು ಸಚಿವ ಸಂಪುಟ ವಿಸ್ತರಣೆ ಬಗ್ಗೆ, ಆ ಕುರಿತಂತೆ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಜೊತೆಗೆ ವಿಸೃತವಾಗಿ ಚರ್ಚಿಸಲಾಗಿದೆ. ಸದ್ಯದಲ್ಲೇ ಅದಕ್ಕೆ ಅನುಮತಿ ಸಿಗಲಿದೆ. ಇಂದಿನ ಭೇಟಿಯಲ್ಲಿ ಸಂತಸದಿಂದಲೇ ಎಲ್ಲವನ್ನೂ ತಿಳಿಸಿದ್ದಾರೆ. ನನಗೂ ಇಂದಿನ ಭೇಟಿ ಖುಷಿ ತಂದಿದೆ. ಹೀಗಾಗಿ ಶೀಘ್ರದಲ್ಲೇ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಆಗಲಿದ್ಯಾ ಎನ್ನುವ ಬಗ್ಗೆ ಸಿಹಿ ಸುದ್ದಿ ನೀಡಲಿದ್ದೇನೆ ಎಂದು ಹೇಳಿದರು.