Belagavi

ಅಗಸಗಿ ಗ್ರಾ.ಪಂ.ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಯಲ್ಲಿ ಸತೀಶ ಜಾರಕಿಹೊಳಿ ಕಮಾಲ್..!

Share

ಬೆಳಗಾವಿ ತಾಲೂಕಿನ ಅಗಸಗಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ.

ಶುಕ್ರವಾರ ಅಗಸಗಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಎಸ್‍ಟಿ ಮೀಸಲಾತಿ ಹಿನ್ನೆಲೆ ಮಾಳೇನಟ್ಟಿ ಗ್ರಾಮದ ಚನ್ನಮ್ಮ ತಿರಮಾಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಅಗಸಗಿಯ ಭೈರು ಕಂಗ್ರಾಳ್ಕರ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣೆ ಅಧಿಕಾರಿಗಳು ಅವಿರೋಧ ಆಯ್ಕೆ ಘೋಷಣೆ ಮಾಡುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಗುಲಾಲು ಎರಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಜಿ.ಪಂ.ಉಪಾಧ್ಯಕ್ಷ ಅರುಣ್ ಕಟಾಂಬಳೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಅಗಸಗಿ ಗ್ರಾಮ ಪಂಚಾಯತಿಯಲ್ಲಿ ಒಟ್ಟು 13 ಸದಸ್ಯರ ಸಂಖ್ಯೆಯ ಬಲಾಬಲವಿದ್ದು, ಇದರಲ್ಲಿ 6 ಕಾಂಗ್ರೆಸ್ ಬೆಂಬಲಿತ ಸದಸ್ಯರು, 6 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಆದರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ರಣತಂತ್ರದಿಂದ ಅಗಸಗಿ ಗ್ರಾಮ ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ ಬಂದಿದ್ದು. ಇದರಿಂದ ಬಿಜೆಪಿ ನಾಯಕರಿಗೆ ತೀವ್ರ ಹಿನ್ನೆಡೆ ಉಂಟಾಗಿದೆ.

Tags:

error: Content is protected !!