Medical

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್

Share

ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ವಿಧಾನಪರಿಷತ್‍ನ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಬಂಧ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಎಸ್.ಆರ್.ಪಾಟೀಲ್ ಅವರು, ಸಣ್ಣ ಪ್ರಮಾಣದ ಅನಾರೋಗ್ಯದ ಕಾರಣ ಮತ್ತು 1 ವಾರ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದರಿಂದ ನನಗೆ ಸದನಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ. ವೈದ್ಯರ ಚಿಕಿತ್ಸೆಯಿಂದ ನಾನು ಚೇತರಿಸಿಕೊಳ್ಳುತ್ತಿದ್ದೇನೆ.

ಮಾಧ್ಯಮದವರು, ಅಭಿಮಾನಿಗಳು, ಸ್ನೇಹಿತರು ಆತಂಕದಿಂದ ಪೊನ್ ಮಾಡುತ್ತಿದ್ದಾರೆ. ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ, ಶೀಘ್ರದಲ್ಲೇ ಗುಣಮುಖನಾಗಲಿದ್ದೇನೆ ಎಂದು ತಿಳಿಸಿದ್ದಾರೆ.

 

Tags:

error: Content is protected !!