Belagavi

ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸಿ..ಎ.ಪುಟ್ಟಸ್ವಾಮಿ

Share

ಕೋವಿಡ್-19 ತುರ್ತು ಪರಿಸ್ಥಿತಿಯಲ್ಲಿ 24/7 ಕೊರೊನಾ ವಾರಿಯರ್ಸ ಆಗಿ ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸಿದ ಅರೆ ವೈದ್ಯಕೀಯ ಮತ್ತು ಇತರೆ ಸಿಬ್ಬಂದಿಗಳಿಗೆ ವೈದ್ಯರಿಗೆ ನೀಡಿರುವಂತೆ ವಿಶೇಷ ಭತ್ಯೆಯನ್ನು ಮಂಜೂರು ಮಾಡುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖಾ ಅಧಿಕಾರಿಗಳು ಮತ್ತು ನೌಕರ ಕೇಂದ್ರ ಸಂಘದ ರಾಜ್ಯಾಧ್ಯಕ್ಷರ ಎ.ಪುಟ್ಟಸ್ವಾಮಿ ಆಗ್ರಹಿಸಿದರು.

ಬೆಳಗಾವಿಯಲ್ಲಿ ಇನ್‍ನ್ಯೂಸ್ ಜೊತೆ ಮಾತನಾಡಿದ ಎ.ಪುಟ್ಟಸ್ವಾಮಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ವಿಲೀನಗೊಳಿಸಬೇಕು. ಅದೇ ರೀತಿ ದೀರ್ಘಾವಧಿಯಲ್ಲಿ ಬಾಕಿ ಇರುವ ಎಲ್ಲಾ ವೃಂದಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಣೆ ಮಾಡುವುದು ಹಾಗೂ ಆರೋಗ್ಯ ಇಲಾಖೆಯ ಅತ್ಯಗತ್ಯ ಸೇವಾ ಇಲಾಖೆ ಆಗಿರುವುದರಿಂದ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇಮಕಾತಿ ಮೂಲಕ ಭರ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಈ ವೇಳೆ ಒತ್ತಾಯಿಸಿದರು.

ಈ ವೇಳೆ ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಜಗದೀಶಗೌಡ ಪಾಟೀಲ್, ಪದಾಧಿಕಾರಿಗಳಾದ ಜಗದೀಶ ಗಣಾಚಾರಿ, ನವೀನ್ ಗಿರಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!