ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಜ್ಯಮಟ್ಟದ ಸಮಾವೇಶವನ್ನು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮಂಗಳವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಜ್ಯಾಧ್ಯಕ್ಷ ಮುಬಾರಕ್ ಅಂಗಡಿ ನೇತೃತ್ವ ವಹಿಸಿದ್ದರು. ಈ ವೇಳೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪ್ರಶಸ್ತಿ ಮತ್ತು ಸದಸ್ಯರಿಗೆ ಗುರುತಿನ ಚೀಟಿ ನೀಡಿ ಗೌರವಿಸಲಾಯಿತು.
ಇದೇ ವೇಳೆ ವೀರಭದ್ರನಗರದ ಮೊದಲ ಕ್ರಾಸ್‍ನಲ್ಲಿ ರಾಜ್ಯ ಮಾನವ ಹಕ್ಕುಗಳ ಸದಸ್ಯರ ಕಚೇರಿಯನ್ನು ಗಣ್ಯರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರವೀಂದ್ರ ತೋಟಗೇರ, ನ್ಯಾಯವಾದಿ ಶಿಲ್ಪಾ ಗೋಡಿಗೌಡರ, ಸತ್ತಾರಖಾನ್ ಬಶೀರ್ ಶೇಖ್, ಮೊಹಮ್ಮದ್ ಸಲೀಂ ಸನದಿ, ಜಾವೇದ್ ಸನದಿ, ಮೋಶಿನ್ ಜುಂಜವಾಡ್ಕರ್, ಫಿರೋಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.