Belagavi

ಇಂಧನ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Share

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಬೆಳಗಾವಿ ಜಿಲ್ಲಾ ನಗರ, ಗ್ರಾಮೀಣ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದಿಂದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಬಳಿ ಶುಕ್ರವಾರ ಸೇರಿದ ಬೆಳಗಾವಿ ಜಿಲ್ಲಾ ನಗರ, ಗ್ರಾಮೀಣ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮುಖಂಡರು, ಕಾರ್ಯಕರ್ತರು, ಬೈಕ್ ಮಲಗಿಸಿ ಮಾಲೆ ಹಾಕಿ ಸರಕಾರದ ಬೆಲೆ ಏರಿಕೆ ನೀತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮುಖಂಡ ಮಂಜುನಾಥ ಕಾಂಬಳೆ ಮಾತನಾಡಿ, ಕೋವಿಡ್‍ನಿಂದ ಜನರು ಸಂಕಷ್ಟದಲ್ಲಿದ್ದಾರೆ. ನಿರುದ್ಯೋಗ ತಾಂಡವವಾಡುತ್ತಿದೆ. ಇಂಥದರಲ್ಲಿ ಇಂಧನ ಬೆಲೆ ದಿನವೂ ಏರಿಕೆಯಾಗುತ್ತಿದೆ. ಸರಕಾರಕ್ಕೆ ಈ ಬೆಲೆ ಏರಿಕೆ ತಡೆಯುವುದು ಸಾಧ್ಯವಾಗುತ್ತಿಲ್ಲ. ಇದು ಜನಸಾಮಾನ್ಯರ ಸರಕಾರ ಅಲ್ಲ, ಇಂಥ ಸರಕಾರ ನಮಗೆ ಬೇಡ. ಜನರು ಈ ಸರಕಾರವನ್ನು ಕಿತ್ತೊಗೆಯಲು ಸಂಕಲ್ಪ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Tags:

error: Content is protected !!