ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಡೀ ದೇಶ ಉತ್ತರಾಖಂಡದ ರಾಜ್ಯದ ಜನರ ಜೊತೆಗೆ ಇದೆ. ಅಲ್ಲಿನ ಜನರ ಸುರಕ್ಷತೆಗಾಗಿ ಇಡೀ ದೇಶವೇ ಪ್ರಾರ್ಥಿಸುತ್ತಿದೆ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದೇನೆ. ಹಿರಿಯ ಅಧಿಕಾರಿಗಳು ಪರಿಸ್ಥಿತಿ ಬಗ್ಗೆ ಅವಲೋಕನ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ, ನೆರವು ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.