ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪ್ರಾದೇಶಿಕ ಭಾಷೆಯ ಪ್ರಾತಿನಿಧಿಕ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ನಾನು ಕೂಡ ಸ್ಪರ್ಧಾಕಾಂಕ್ಷಿಯಾಗಿದ್ದು, ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹಿರಿಯ ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ತಿಳಿಸಿದರು.
: ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಹಿರಿಯ ಸಾಹಿತಿ ಹಾಗೂ ಕೇಂದ್ರ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸಂಗಮೇಶ ಬಾದವಾಡಗಿ ಮಾತನಾಡಿ, ಕನ್ನಡ ಸಾಹಿತ್ಯದ ಸಂಸ್ಕøತಿ ಮತ್ತು ಆಸ್ಮಿತೆಯನ್ನು ಕಾಪಾಡಿ ಸಾಹಿತ್ಯ ಲೋಕದ ಶ್ರೀಮಂತಿಕೆ ಹೆಚ್ಚಿಸುವ ಕೆಲಸ ಆಗಬೇಕು. ಅದಕ್ಕಾಗಿ ಸಾಹಿತಿಗಳೇ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿರಬೇಕು ಎಂಬ ಅಭಿಪ್ರಾಯ ನನ್ನದಾಗಿದೆ. ಹಾಗಾಗಿ ಮೇ ತಿಂಗಳಲ್ಲಿ ನಡೆಯುವ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದರು.
ಕನ್ನಡ ಸಾಹಿತ್ತ ಪರಿಷತ್ತಿಗೆ ಈಗ 3 ಲಕ್ಷ 29 ಸಾವಿರ ಸದಸ್ಯರಿದ್ದಾರೆ. ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪ್ರಾದೇಶಿಕ ಭಾಷೆಯ ಪ್ರಾತಿನಿಧಿಕ ಸಂಸ್ಥೆ ಎಂದು ಏಷ್ಯಾದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಇಂತಹ ಸಂಸ್ಥೆಯ ಅಧ್ಯಕ್ಷನಾಗುವುದು ಗೌರವದ ವಿಷಯ ಎಂದರು.
ಗಡಿ ಸಮಸ್ಯೆಗಳನ್ನು ಬಗೆಹರಿಸಲು ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯನಾಗಿ ದುಡಿದು ಸರಕಾರಕ್ಕೆ ವರದಿ ಸಲ್ಲಿಸಿದ ಅನುಭವ ನನಗಿದೆ. ಗಡಿ ಬರೀ ಗೆರೆಯಾಗದೇ ಅದು ಸಾಮರಸ್ಯದ ಪ್ರದೇಶವಾಗಬೇಕು ಎಂದು ಮಾರ್ಮಿಕವಾಗಿ ನುಡಿದರು.
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದರೆ ಉತ್ತರ ಕರ್ನಾಟಕ ಭಾಗದಲ್ಲಿ ಕಸಾಪ ರಾಜ್ಯ ಕಾರ್ಯಾಲಯ ವಿಸ್ತರಿಸಲಾಗುವುದು ಎಂದರು.
ಈ ವೇಳೆ ಎಲ್.ಸಿ. ಮಾವನೂರ, ಕೆ. ಆರ್. ಕಂದಗಲ್, ಬಿ. ಎಸ್.ಸೊಲ್ಲಾಪುರ ಇತರರು ಉಪಸ್ಥಿತರಿದ್ದರು.