ಮಟಕಾ ವಿರುದ್ಧ ಬೆಳಗಾವಿ ಪೊಲೀಸರ ದಾಳಿ ಮುಂದುವರಿದಿದೆ. ಮಟಕಾ ದಂಧೆಯಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಕಾಕತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಸೋಯಲ್ ಮೆಹಬೂಬ್ ಶೇಖ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 6880 ರೂಪಾಯಿ ನಗದು, 1 ಮೊಬೈಲ್ ಮತ್ತು ಮಟಕಾ ಚೀಟಿಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.