.ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತಡರಾತ್ರಿ ವಿಜಯಪುರ ಜಿಲ್ಲೆಯ ಬಬಲೇಶ್ವರ ಹಾಗೂ ನಿಡೋಣಿ ಗ್ರಾಮದ ಮಧ್ಯೆ ನಡೆದಿದೆ.
ಬಬಲೇಶ್ವರದಿಂದ ನಿಡೋಣಿಗೆ ಕಾರಿನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿಯಾಗಿ ಈ ಅವಘಡ ನಡೆದಿದೆ. ಬಬಲೇಶ್ವರದ ಗುರುರಾಜ್ ಪಾಟೀಲ (27) ಹಾಗೂ ಅತಾಲಟ್ಟಿಯ ಅಪ್ಪು ಕಾರಿ(29) ಮೃತ ದುರ್ದೈವಿಗಳು.
ಘಟನೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದು ಅವರನ್ನು ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.