ಯಮಕನಮರಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕೇದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಶವ್ವ ಹೊಸಮನಿ, ಉಪಾಧ್ಯಕ್ಷರಾಗಿ ಸವಿತಾ ಕೇದನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಯಮಕನಮರಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕೇದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಗುರುವಾರ ಕೇದನೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಶವ್ವ ಹೊಸಮನಿ ಮಣ್ಣಿಕೇರಿ, ಉಪಾಧ್ಯಕ್ಷರಾಗಿ ಸವಿತಾ ಸಂಭಾಜಿ ಕೇದನೂರ ಅವಿರೋಧವಾಗಿ ಆಯ್ಕೆಯಾದರು. ಶಾಸಕ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಚುನಾವಣೆ ನಡೆಯಿತು.
ವಿಜೇತರಿಗೆ ಪಂಚಾಯಿತಿ ಕಟ್ಟಡದ ಆವರಣದಲ್ಲಿ ಮಾಲೆ ಹಾಕಿ ಗುಲಾಲು ಎರಚಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.