ಕೊರೋನಾ ಸಾಂಕ್ರಾಮಿಕ ರೋಗದ ಪ್ರಸಾರ ಇನ್ನೂ ಇದೆ. ಹಾಗಾಗಿ ಸರಕಾರಿ, ಅರೆ ಸರಕಾರಿ, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದೃಷ್ಟಿದೋಷ, ಅಂಗವಿಕಲ ಅಧಿಕಾರಿ, ನೌಕರರಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚನೆ ನೀಡಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ದೇಶ ಮತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಪ್ರಸಾರ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಆರೋಗ್ಯ ಮಂತ್ರಾಲಯ ಜನವರಿ 5ರಂದು ಪ್ರಕಟಿಸಿದ್ದ ಮಾರ್ಗಸೂಚಿಗಳನ್ನು ಮುಂದುವರಿಸಲು ಆದೇಶ ನೀಡಲಾಗಿದೆ. ಕರ್ನಾಟಕದ ಆರೋಗ್ಯ ಸಚಿವಾಲಯ ಹಾಗೂ ಎಲ್ಲ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದೃಷ್ಟಿದೋಷ, ಅಂಗವಿಕಲ ಅಧಿಕಾರಿ, ನೌಕರರಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.