ಖಾನಾಪೂರ ತಹಶೀಲ್ದಾರ ಕಾರ್ಯಾಲಯದಲ್ಲಿ ಮಡಿವಾಳ ಸಮಾಜದ ಪ್ರಮುಖರೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಶೀಲ್ದಾರ ರೇಷ್ಮಾ ತಾಳಿಕೋಟಿ ಅವರು ಮಡಿವಾಳ ಮಾಚಿದೇವ ಪೆÇೀಟೋಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ತದನಂತರ ತಹಶೀಲ್ದಾರ ರೇಷ್ಮಾ ತಾಳಿಕೋಟಿ ಮಾತನಾಡಿ, 12ನೇ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ,ಮೇಲು-ಕೀಲು ತಾರತಮ್ಯ, ಅಸ್ಪ್ರಶ್ಯತೆ,ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು.
ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು,ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು-ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಮಡಿವಾಳ ಮಾಚಿದೇವ ಕೈಗೊಂಡರು ಎಂದರು.
ಈ ಸಂದರ್ಭದಲ್ಲಿ ಮಡಿವಾಳ ಸಮಾಜದ ಪ್ರಮುಖರು, ಅಧಿಕಾರಿಗಳು ಉಪಸ್ಥಿತರಿದ್ದರು.