ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳು ಸಾಲು ಸಾಲಾಗಿ ಮುಂದುವರಿದಿವೆ. ಈಗ ಮತ್ತೆ 3 ರಸ್ತೆಗಳ ಅಭಿವೃದ್ಧಿ ಯೋಜನೆಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದ್ದಾರೆ.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದ 3 ರಸ್ತೆಗಳ ಅಭಿವೃದ್ಧಿಗೆ ಪೂಜೆ ನೆರವೇರಿಸಿದರು. ಬಹು ವರ್ಷಗಳ ಬೇಡಿಕೆಗೆ ಸ್ಪಂದನೆ ಸಿಗುತ್ತಿರುವುದಕ್ಕೆ, ದಶಕಗಳ ನಂತರ ತಮ್ಮೂರು ಅಭಿವೃದ್ಧಿ ಕಾಣುತ್ತಿರುವುದಕ್ಕೆ ಜನರು ಹರ್ಷಗೊಂಡಿದ್ದಾರೆ.
ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಒಟ್ಟು 75 ಲಕ್ಷ ರೂ,ಗಳ ವೆಚ್ಚದಲ್ಲಿ ಮಾಸ್ತಮರ್ಡಿ ಗ್ರಾಮದಿಂದ ತಾರೀಹಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗಳಿಗೆ ಲಕ್ಷ್ಮಿ ಹೆಬ್ಬಾಳಕರ್ ಅಧಿಕೃತವಾಗಿ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಕ್ಕ ನಾಯಕ, ಸದಸ್ಯರಾದ ಯಲ್ಲಪ್ಪ ಗ್ವೌಂಡಾಡಕರ, ನಾಮದೇವ ಜೋಗನ್ನವರ, ಗೀತಾ ತಳವಾರ, ಗೀತಾ ಮುಚ್ಚಂಡಿ, ಪ್ರಮೋದ್ ಜಾಧವ್, ಬಸವಂತ ಕುಂದರಗಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.
: ಅದೇ ರೀತಿ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯ ಅನುದಾನದಲ್ಲಿ ಒಟ್ಟು ಎರಡು ಕೋಟಿ ಎಂಬತ್ತೆರಡು ಲಕ್ಷ ರೂ,ಗಳ ವೆಚ್ಚದಲ್ಲಿ ತಾರೀಹಾಳ ಗ್ರಾಮದಿಂದ ಹಿರೇಬಾಗೇವಾಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಡಾಂಬರೀಕರಣದ ಕಾಮಗಾರಿಗಳಿಗೂ ಲಕ್ಷ್ಮಿ ಹೆಬ್ಬಾಳಕರ್ ಅಧಿಕೃತವಾಗಿ ಚಾಲನೆ ನೀಡಿದರು.
ಇನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಸುಮಾರು 45 ಲಕ್ಷ ರೂಗಳ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಿಂದ ಬಡೇಕೊಳ್ಳಿ ಮಠ್ (ಸಿದ್ದನಭಾವಿ) ವರೆಗೆ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೂ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ನಾಗಯ್ಯಜ್ಜ ಸ್ವಾಮಿಗಳು, ಸಿಸಿ ಪಾಟೀಲ ಅಣ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸ್ವಾತಿ ಇಟಗಿ, ಉಪಾಧ್ಯಕ್ಷರಾದ ನಾಜರಿನ್ ಕರಿದಾವಲ್, ಅಡಿವೇಶ ಇಟಗಿ, ಸಲೀಮ್ ಸತ್ತಿಗೇರಿ, ಶಿವಾನಂದ ತೋಟಗಿ, ಬಸನಗೌಡ ಪಾಟೀಲ, ಸಯ್ಯದ್ ಸನದಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.