ಬೆಳಗಾವಿಯ ಶಾಹಪುರದಲ್ಲಿ ಜ್ಞಾನಜೋತಿ ಸಂಸ್ಥೆ ಮತ್ತು ಪೃಥ್ವಿ ಸಿಂಗ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಅನಾಥ ಮಕ್ಕಳಿಗೆ ಉಚಿತ ಕೋರ್ಸಗಳ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಾಹಪುರದ ಕಚೇರಿಗಲ್ಲಿಯಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮಕ್ಕೆ ವೇದಿಕೆ ಮೇಲಿದ್ದ ಗಣ್ಯರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಸಾನಿಧ್ಯ ವಹಿಸಿದ್ದ ರೇವಣಸಿದ್ದೇಶ್ವರ ಸ್ವಾಮೀಜಿ ಮಾತನಾಡಿ ಕರ್ನಾಟಕ ಕೌಶಲ್ಯ ಯೋಜನೆ ಮೂಲಕ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ನಿಜಕ್ಕೂ ಸಂತಸದ ಸಂಗತಿಯಾಗಿದೆ. ಹೀಗಾಗಿ ಮಕ್ಕಳು ಈ ಉಚಿತ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡು ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿ ರವೀಂದ್ರ ರತ್ನಕರ್ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಲೂರ್ಡ್ ಮೇರಿ, ಪೃಥ್ವಿ ಸಿಂಗ್ ಫೌಂಡೇಶನ ಅಧ್ಯಕ್ಷ ಪೃಥ್ವಿ ಸಿಂಗ್, ಮಹಿಳಾ ಸಾಂತ್ವನ ಕೇಂದ್ರದ ನಿರ್ದೇಶಕಿ ವಿಜಯಾ ಹಿರೇಮಠ್, ಜ್ಞಾನಜ್ಯೋತಿ ಸಂಸ್ಥೆ ಅಧ್ಯಕ್ಷೆ ಪಲ್ಲವಿ ನೇಸರಗಿ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.