ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಜಾಗೃತ ಕ್ಷೇತ್ರವೆಂದೇ ಹೆಸರಾದ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದ ಬಾಗಿಲು ಸೋಮವಾರ ಭಕ್ತರ ದರ್ಶನಕ್ಕೆ ತೆರೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ ಭಕ್ತರ ದಂಡು ದೇವಸ್ಥಾನಕ್ಕೆ ಧಾವಿಸಿದ್ದು, ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರಗಳು ಆರಂಭಗೊಂಡಿದ್ದು, ಸೋಮವಾರದಿಂದ ದೇವಸ್ಥಾನ ಸಾರ್ವಜನಿಕರ ದರ್ಶನಕ್ಕೆ ತೆರೆದುಕೊಂಡಿದೆ. ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು.
ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದ್ದರೂ, ಭಕ್ತರು ದೇವರ ದರ್ಶನ ಪಡೆಯುವ ಧಾವಂತದಲ್ಲಿ ಇದನ್ನೆಲ್ಲ ಮರೆತಂತೆ ಕಂಡಿತು.