ಖಾನಾಪುರ ತಾಲೂಕು ನಂದಗಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ವಿದ್ಯಾ ಮಾದಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆದು ಮನ್ಸೂರ್ ತಹಶೀಲ್ದಾರ ಆಯ್ಕೆಯಾದರು.

ನಂದಗಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಗುರುವಾರ ಜರುಗಿತು.ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿದ್ಯಾ ಮಾದಾರ ಅವಿರೋಧವಾಗಿ ಆಯ್ಕೆಯಾದರು. ಅದರಂತೆ ಉಪಾಧ್ಯಕ್ಷ ಸ್ಥಾನಕ್ಕೆ ಮನ್ಸೂರ್ ತಹಶೀಲ್ದಾರ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಸವ್ವ ಹತ್ತರವಾಡ ಪರಾಜಿತರಾದರು. ಚುನಾವಣಾಧಿಕಾರಿ ಅಡವಿಮಠ ಫಲಿತಾಂಶ ಘೋಷಿಸಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿದ್ಯಾ ಮಾದಾರ ಮಾತನಾಡಿ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ವಿವಿಧ ಯೋಜನೆಗಳನ್ನು ಶೀಘ್ರವಾಗಿ ಹಮ್ಮಿಕೊಂಡು ಅಭಿವೃದ್ಧಿ ನಡೆಸಲಾಗುವುದು ಎಂದರು.
ಸಂದರ್ಭದಲ್ಲಿ ಮಾತನಾಡಿದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಮನ್ಸೂರ್ ತಾಹಶೀಲ್ದಾರ ಮಾತನಾಡಿ, ಮೊದಲ ಸದಸ್ಯರಾಗಿ ಸೇವೆ ಸಲ್ಲಿಸಿರುವ ಅನುಭವಿದ್ದು ಮುಂದಿನ ದಿನಗಳಲ್ಲಿ ಗ್ರಾಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಯೊಜನೆಗಳನ್ನು ಹಮ್ಮಿಕೊಳ್ಳಲಾಗುವುದು.ಮಾಜಿ ಶಾಸಕ ಅರವಿಂದ ಪಾಟೀಲ,ಪಾರಿಶ್ವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಜಿತೇಂದ್ರ ಮಾದಾರ ಇವರ ಮಾರ್ಗದರ್ಶನದಲ್ಲಿ ಪಕ್ಷಾತೀತವಾಗಿ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಬೆಂಬಲಿಗ ಸದಸ್ಯರು ಉಪಸ್ಥಿತರಿದ್ದರು.