National

ನಾಳೆ ದೇಶಾಧ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್‍ಗೆ ಕರೆ..ಮುಂದುವರಿದ ಅನ್ನದಾತರ ಧರಣಿ

Share

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ಕೇಂದ್ರ ಸರ್ಕಾರದ ದೌರ್ಜನ್ಯ ಖಂಡಿಸಿ ನಾಳೆ ದೇಶಾಧ್ಯಂತ ರಾಷ್ಟ್ರೀಯ ಹೆದ್ದಾರಿ ತಡೆಯಲು ಹೋರಾಟಗಾರರು ಹಮ್ಮಿಕೊಂಡಿದ್ದಾರೆ.

ಹೌದು ಕೇಂದ್ರ ಸರ್ಕಾರದ ವಿರುದ್ಧ ಕಳೆದ ಎರಡು ತಿಂಗಳಿನಿಂದ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತ ಹೋರಾಟಗಾರರು ನೂತನ ಕೃಷಿ ಮಸೂದೆ ವಾಪಸ್ಸು ಪಡೆಯುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಮೋದಿ ಸರ್ಕಾರ ಕೂಡ ರೈತರ ಹೋರಾಟಕ್ಕೆ ಕ್ಯಾರೆ ಎನ್ನುತ್ತಿಲ್ಲ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮೊನ್ನೆಯಷ್ಟೇ ದೆಹಲಿ ಸೇರಿದಂತೆ ದೇಶಾಧ್ಯಂತ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗಿತ್ತು. ಈಗ ನಾಳೆ ಶನಿವಾರ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡುವ ಮೂಲಕ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಹೋರಾಟಗಾರರು ಮುಂದಾಗಿದ್ದಾರೆ. ಅದೇ ರೀತಿ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ರೈತ ಹೋರಾಟಗಾರರು ಪ್ರತಿಭಟನೆ ಮಾಡಲಿದ್ದಾರೆ.

ಒಟ್ಟಾರೆ ನಾಳೆ ಮತ್ತೊಂದು ಸುತ್ತಿನ ಹಣಾಹಣಿಗೆ ಅನ್ನದಾತರು ಸಿದ್ಧರಾಗಿದ್ದು. ನಾಳೆ ಯಾವ ರೀತಿಯ ಹೋರಾಟಕ್ಕೆ ಮಣ್ಣಿನ ಮಕ್ಕಳು ಸಾಕ್ಷಿ ಆಗುತ್ತಾರೆ ಎಂದು ಕಾಯ್ದು ನೋಡಬೇಕಿದೆ.

 

 

Tags:

error: Content is protected !!