ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ರೂ ಕೂಡ ಈ ಸಚಿವರಿಗೆ ಮಾಜಿ ಸಿಎಂ ಸಿದ್ದರಾಮಯ್ಯರ ಮೇಲಿನ ಅಭಿಮಾನ ಮಾತ್ರ ಕಡಿಮೆಯಾಗಿಲ್ಲ. ನಾವು ಯಾವುದೇ ಪಕ್ಷದಲ್ಲಿ ಇದ್ದರೂ ಸಿದ್ದರಾಮಯ್ಯರೇ ನಮ್ಮ ನಾಯಕ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರಿನ ಸುತ್ತೂರು ಮಠದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಜೊತೆ ಬಿಜೆಪಿ ಸೇರ್ಪಡೆ ನಂತರ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೋಮಶೇಖರ್ ಸಿದ್ದರಾಮಯ್ಯ ನಮ್ಮ ಹಳೇ ನಾಯಕರು. ಕಾಂಗ್ರೆಸ್ ಬಿಟ್ಟ ಮೇಲೆ ಸಿದ್ದರಾಮಯ್ಯರ ಜತೆ ಮೊದಲ ಬಾರಿಗೆ ವೇದಿಕೆ ಹಂಚಿಕೊಂಡಿದ್ದೇನೆ. ಬಹಳ ಸಂತೋಷದಿಂದ ಮಾತನಾಡಿಸಿದರು ಎಂದರು. ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆಯಲ್ಲಿ ನಾನು ಮಾತನಾಡೋಲ್ಲ ನೀವೇ ಮಾತನಾಡಿ ಎಂದು ಸಿದ್ದರಾಮಯ್ಯಗೆ ಹೇಳಿದೆ. ಅದಕ್ಕೆ ಬಹಳ ಕಿಲಾಡಿ ಇದ್ದೀಯಾ ಕನಯ್ಯಾ ನೀನು ಅಂತ ಹಾಸ್ಯ ಮಾಡಿದರು ಎಂದು ಹೇಳಿದರು.