Agriculture

ನಿಪ್ಪಾಣಿಯಲ್ಲಿ ಮಾನವ ಸರಪಳಿ ಮೂಲಕ ಹೆದ್ದಾರಿ ತಡೆದ ರೈತರು

Share

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ದೇಶಾಧ್ಯಂತ ರೈತ ಮುಖಂಡರು ಹೆದ್ದಾರಿ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ನಿಪ್ಪಾಣಿಯಲ್ಲಿಯೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ನಿಪ್ಪಾಣಿ ನಗರದ ಸಂಭಾಜಿ ವೃತ್ತದಲ್ಲಿ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯನ್ನು ತಡೆದು ರೈತರು ಪ್ರತಿಭಟನೆ ನಡೆಸಿದರು. ಈ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ರೈತ ಮುಖಂಡರು ಕಳೆದ ಎರಡು ತಿಂಗಳಿನಿಂದ ರೈತರು ಕೊರೆಯುವ ಚಳಿಯಲ್ಲಿಯೂ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಇದಕ್ಕೆ ಕೇಂದ್ರ ಸರ್ಕಾರದ ಯಾವುದೇ ರೀತಿ ಸ್ಪಂದನೆ ನೀಡುತ್ತಿಲ್ಲ. ಹೀಗೆ ಆದ್ರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಪ್ರಕಾಶ ಗಾಯಕವಾಡ ಅವರಿಗೆ ಕೇಂದ್ರದ ಮೂರು ಕೃಷಿ ಮಸೂದೆ ರದ್ಧು ಮಾಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಈ ವೇಳೆ ವಿವಿಧ ಸಂಘಟನೆಗಳ ಮುಖಂಡರು, ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇನ್ನು ಪಿಎಸ್‍ಐ ಅನೀಲ ಕುಂಬಾರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

 

Tags:

error: Content is protected !!