Gokak

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕ್‍ನಲ್ಲಿ ಪ್ರತಿಭಟನೆ

Share

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಕೂಡಲಸಂಗಮದ ಬಸವಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನವರೆಗೂ ಪಾದಯಾತ್ರೆ ನಡೆಯುತ್ತಿದೆ. ಅದರ ಭಾಗವಾಗಿ ರಾಜ್ಯದ ವಿವಿಧೆಡೆ ಪಂಚಮಸಾಲಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಅದೇ ರೀತಿ ಗೋಕಾಕ್‍ನಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಗೋಕಾಕ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿ ತಕ್ಷಣವೇ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
: ಈ ವೇಳೆ ಪಂಚಮಸಾಲಿ ಸಮುದಾಯದ ತಾಲೂಕಾಧ್ಯಕ್ಷ ಪ್ರಕಾಶ ಬಾಗೋಜಿಯವರು ಮಾತನಾಡಿ ಮುಖ್ಯಮಂತ್ರಿಗಳು 2ಎ ಮಿಸಲಾತಿಗೆ ಸಂಬಂಧಿಸಿದಂತೆ ಮಧ್ಯಾಹ್ನವೊಂದು, ಸಂಜೆ ಮತ್ತೊಂದು ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಒಂದು ವೇಳೆ ನಿಮಗೆ ಮಾಡಲು ಆಗದೇ ಹೋದ್ರೆ ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ. ಬಸನಗೌಡ ಪಾಟೀಲ್ ಯತ್ನಾಳ್‍ರನ್ನು ಸಿಎಂ ಮಾಡಿ ಅವರು ನಮಗೆ 2ಎ ಮೀಸಲಾತಿ ನೀಡುತ್ತಾರೆ ಎಂದು ಆಗ್ರಹಿಸಿದರು.

: ಬಳಿಕ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ವೇಳೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

 

 

Tags:

error: Content is protected !!