ಬೆಳಗಾವಿ: ಕೇಂದ್ರ ಪರಿಸ್ಕøತ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕುರಿ/ಮೇಕೆ ಘಟಕ ಹಾಗೂ (E-Cart) ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿನ ಕೇಂದ್ರ ಪರಿಸ್ಕøತ ಕಾರ್ಯಕ್ರಮದಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಇ-ಅಚಿಡಿಣ (ಹಣ್ಣು ಮತ್ತು ತರಕಾರಿಗಳನ್ನು ಮಾರುವ ಎಲೆಕ್ಟ್ರಿಕ್ ವಾಹನ) ಮತ್ತು ಕುರಿ/ಮೇಕೆ ಘಟಕ (ಮಹಿಳೆಯರಿಗೆ ಮಾತ್ರ) ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಗಳಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಫೆ.25ರೊಳಗಾಗಿ ಸಂಬಂಧಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಗಳಿಗೆ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ: 0831-2407246 ಗೆ ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.