ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಚನ್ನರಾಜ ಹಟ್ಟಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ, ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗೀತಾ ಎಂ.ಹಿರೇಮಠ, ಉಪಾಧ್ಯಕ್ಷರಾಗಿ ಬಸವಂತ ನಾಯಕ ಆಯ್ಕೆಯಾದರು. ಲಕ್ಷ್ಮಿ ಹೆಬ್ಬಾಳಕರ್ ಸೂಚನೆಯಂತೆ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಬಡಾಲ ಅಂಕಲಗಿಗೆ ತೆರಳಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ, ಸತ್ಕರಿಸಿದರು.
ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಹಕಾರ ನೀಡಲಿದ್ದಾರೆ. ನೀಲನಕ್ಷೆಯೊಂದನ್ನು ತಯಾರಿಸಿ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್ ಯುವ ಮುಖಂಡ ಚನ್ನರಾಜ ಹಟ್ಟಿಹೊಳಿ ಭರವಸೆ ನೀಡಿದರು.
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಹಕಾರ ನೀಡಿದ್ದಕ್ಕಾಗಿ ಮತ್ತು ಗ್ರಾಮೀಣ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುತ್ತಿರುವುದಕ್ಕಾಗಿ ಗ್ರಾಮಸ್ಥರು ಚನ್ನರಾಜ ಹಟ್ಟಿಹೊಳಿ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು.
ಗ್ರಾಮದ ಹಿರಿಯರು, ಕಾರ್ಯಕರ್ತರು, ಸ್ಥಳೀಯ ಮುಂದಾಳುಗಳು ಉಪಸ್ಥಿತರಿದ್ದರು.