Belagavi

ಬೆಳಗಾವಿಯಲ್ಲಿ ಫೆ.13 ರಂದು ಉದ್ಯೋಗ ಮೇಳ

Share

ಬೆಳಗಾವಿ: “ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ” (NCS) ಅಡಿಯಲ್ಲಿ ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಫೆ.13 ರಂದು ಬೆಳಿಗ್ಗೆ 10.30 ರಿಂದ ಸಾಯಂಕಾಲ 3.30 ಗಂಟೆಗಳವರೆಗೆ ನೆಹರೂ ನಗರದ ರಾಮ್‍ದೇವ್ ಹೊಟೇಲ್ ಹಿಂದುಗಡೆ ‘ಪೀಪಲ್ ಟ್ರೀ ಎಜ್ಯುಕೇಷನ್ ಸೊಸೈಟಿಯ ಕಾಲೇಜ್ ಆಫ್ ಬಿ.ಬಿ.ಎ., ಬಿ.ಸಿ.ಎ. ಮತ್ತು ಬಿ.ಕಾಂ.’ ಕಾಲೇಜಿನಲ್ಲಿ “ಉದ್ಯೋಗ ಮೇಳ” ವನ್ನು ಹಮ್ಮಿಕೊಳ್ಳಲಾಗಿದೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ (ಮೆಕ್ಯಾನಿಕಲ್), ಬಿ.ಇ. (ಮೆಕ್ಯಾನಿಕಲ್ & ಸಿ.ಎಸ್.), ಹೋಟೆಲ್ ಮ್ಯಾನೇಜ್‍ಮೆಂಟ್ ಪದವಿ, ಎಂ.ಸಿ.ಎ. ಹಾಗೂ ಇನ್ನಿತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸದರಿ ಉದ್ಯೋಗಮೇಳದಲ್ಲಿ ವಿಕಲಚೇತನರಿಗೂ ಅವಕಾಶವಿದೆ. ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.

ಆಸಕ್ತರು https://www.sites.google.com/view/ncsjobfairF ಈ ವೆಬ್‍ಸೈಟ್‍ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಉದ್ಯೋಗಮೇಳ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು.

ಸದರಿ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 8762767205 / 9743166374 ಸಂಪರ್ಕಿಸಿ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

error: Content is protected !!