Belagavi

ಬೆಳಗಾವಿಯಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಪತ್ತೆ..ಇಬ್ಬರು ಆರೋಪಿಗಳು ಅರೆಸ್ಟ್

Share

ಬೇರೆ ರಾಜ್ಯದ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳಿಗೆ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿ ಎಪಿಎಂಸಿ ಪೊಲೀಸರು ಯಶಸ್ವಿಯಾಗಿದ್ದಾರೆ.

: ನಿನ್ನೆಯಷ್ಟೇ ಅನೈತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಸ್ಪಾ ಸೆಂಟರ್ ಮೇಲೆ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಮತ್ತೆ ಬೆಳಗಾವಿಯಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಕೇಸ್ ಬಹಿರಂಗವಾಗಿದೆ. ಸದಾಶಿವನಗರದ ಮನೆಯೊಂದರಲ್ಲಿ ಹೊರ ರಾಜ್ಯದ ಹೆಣ್ಣು ಮಕ್ಕಳನ್ನು ಕರೆದುಕೊಂಡು ಬಂದು ಪ್ರತಿಯೊಂದು ಗಿರಾಕಿಗೆ 2500 ರೂಪಾಯಿ ಹಣ ಕೊಟ್ಟು ದಂಧೆ ನಡೆಸುತ್ತಿದ್ದರು. ಇದರಲ್ಲಿ ಓರ್ವ ಮಹಿಳೆಗೆ ಒಂದು ಸಾವಿರ ರೂಪಾಯಿ ಹಣವನ್ನು ಕೊಡುತ್ತಿದ್ದರು.

ಅಷ್ಟೇ ಅಲ್ಲದೇ ಪ್ರತಿ ವಾರ ಬೇರೆ ಬೇರೆ ರಾಜ್ಯದ ಹೆಣ್ಣು ಮಕ್ಕಳನ್ನು ಕರೆಸಿಕೊಂಡು ಬಂದು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಶನಿವಾರ ತಡರಾತ್ರಿ ಎಪಿಎಂಸಿ ಪೊಲೀಸ್ ಠಾಣೆ ಸಿಪಿಐ ಜಾವೇದ್ ಮುಷಾಪುರೆ ನೇತೃತ್ವದಲ್ಲಿ ದಾಳಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದ ಮಾರುತಿ ಬಾಳಪ್ಪ ಕಳಗೇರಿ ಹಾಗೂ ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮದ ಸಿದ್ದಪ್ಪ ಪುಂಡಲೀಕ ಚೌಗಲಾ ಎಂದು ಗುರುತಿಸಲಾಗಿದೆ.

ಈ ಸಂಬಂಧ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿದ್ದು. ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಒಟ್ಟಾರೆ ನಿನ್ನೆ ಸ್ಪಾ ಸೆಂಟರ್‍ನಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆ ಬಹಿರಂಗ ಆಗುತ್ತಿದ್ದಂತೆ ಬೆಳಗಾವಿ ಪೊಲೀಸರು ಫುಲ್ ಅಲರ್ಟ್ ಆಗಿದ್ದು. ಒಂದೊಂದಾಗಿ ವೇಶ್ಯಾವಾಟಿಕೆ ಕೇಸ್‍ಗಳು ಬಹಿರಂಗವಾಗುತ್ತಿವೆ. ಇನ್ನು ಅದೆಷ್ಟು ಪ್ರಕರಣಗಳು ಬೆಳಕಿಗೆ ಬರುತ್ತವೆ ಎಂದು ಕಾಯ್ದು ನೋಡಬೇಕಿದೆ.

 

Tags:

error: Content is protected !!