Belagavi

ಬೆಳಗಾವಿ ಎಂಪಿ ಬೈಎಲೆಕ್ಷನ್ ಘೋಷಣೆಗೆ ಕ್ಷಣಗಣನೆ..ಅಧಿಕಾರಿಗಳಿಂದ ಶಾಲೆಗಳ ಪರಿಶೀಲನೆ

Share

ಬೆಳಗಾವಿ ಲೋಕಸಭೆ ಉಪಚುನಾವಣೆ ಘೋಷಣೆಗೆ ದಿನಗಣನೆ, ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದಿಂದ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಪೂರ್ವ ಸಿದ್ಧತೆಗೆ ಜಿಲ್ಲೆಯ ಅಧಿಕಾರಿಗಳು ಬೆಳಗಾವಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಳಗಾವಿ ಸಂಸದ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಉಪಚುನಾವಣೆಗೆ ದಿನಗಣನೆ, ಕ್ಷಣ ಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಯಾವ ಕ್ಷಣದಲ್ಲಾದರೂ ಆದೇಶ ಹೊರಡಿಸುವ ಸಾಧ್ಯತೆಗಳಿದ್ದು, ಜಿಲ್ಲಾಡಳಿತದಿಂದ ಪೂರ್ವಸಿದ್ಧತೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳಾಗಿ ಪರಿವರ್ತನೆಯಾಗಲಿರುವ ಆಯ್ದ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಪರಿಶೀಲನೆ ಕಾರ್ಯ ಆರಂಭವಾಗಿದೆ.

ಜಿಲ್ಲಾಡಳಿತದ ಸೂಚನೆಯಂತೆ ಜಿಲ್ಲೆಯ ಅಧಿಕಾರಿಗಳು ಬೆಳಗಾವಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ, ಕುಂದು ಕೊರತೆಗಳನ್ನು ಪಟ್ಟಿ ಮಾಡಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಿದ್ಧತೆಗಳು ಸದ್ಯದಲ್ಲೇ ಬೆಳಗಾವಿ ಲೋಕಸಭೆ ಉಪಚುನಾವಣೆ ಯುದ್ಧ ಸನಿಹದಲ್ಲಿದೆ ಎಂಬ ಸೂಚನೆ ನೀಡಿವೆ.

Tags:

error: Content is protected !!