ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಬೆಳಗುಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೇಮಾ ಸುಭಾಷ್ ಹದಗಲ್, ಉಪಾಧ್ಯಕ್ಷರಾಗಿ ಬಾಲಕೃಷ್ಣ ರಾಮಚಂದ್ರ ಲೋಹಾರ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಆಡಳಿತ ಚುಕ್ಕಾಣಿ ಹಿಡಿದಿದ್ದು, ಮಾಜಿ ಶಾಸಕ, ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹರ್ಷ ವ್ಯಕ್ತಪಡಿಸಿದರು.
ಬೆಳಗುಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆ ಗುರುವಾರ ಬೆಳಗುಂದಿ ಗ್ರಾಮ ಪಂಚಾಯಿತಿಯಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೇಮಾ ಸುಭಾಷ್ ಹದಗಲ್, ಉಪಾಧ್ಯಕ್ಷರಾಗಿ ಬಾಲಕೃಷ್ಣ ರಾಮಚಂದ್ರ ಲೋಹಾರ ಆಯ್ಕೆಯಾದರು. ಗ್ರಾಮ ಪಂಚಾಯಿತಿ ಆವರಣದಲ್ಲಿ ಗುಲಾಲು ಎರಚಿ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ಈ ವೇಳೆ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, 60 ವರ್ಷಗಳ ಗ್ರಾಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಬೆಂಬಲಿಗರು ಅಧಿಕಾರ ಹಿಡಿಯುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ರವಳು ಪಾಟೀಲ, ಕಲ್ಲಪ್ಪ ಡೇಕುಳಕರ, ದೀಪಾ ಲೋಹಾರ, ಮಹಾದೇವ ಪಾಟೀಲ, ಸವಿತಾ ತಳವಾರ, ಪ್ರತಾಪ ಸುತಾರ್ ಮತ್ತಿತರರು ಇದ್ದರು.