ಮಕ್ಕಳ ಮನಮುಟ್ಟುವಂತೆ ಬೋಧಿಸಲು ಹಾಗೂ ಸಕಾರಾತ್ಮಕ ಧೋರಣೆ ಮೂಡಿಸಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು.
: ಖಾನಾಪೂರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮುಖ್ಯ ಶಿಕ್ಷಕ, ಶಿಕ್ಷಣ ಸಂಯೋಜಕರ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಮುಕ್ತವಾಗಿ ಚರ್ಚಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾತನಾಡಿ, ಕೋವಿಡ್ ನಿಂದ ಈ ಬಾರಿಯ ಶೈಕ್ಷಣಿಕ ವರ್ಷದ ಮುಕ್ಕಾಲು ಭಾಗ ಮುಗಿಯುತ್ತಾ ಬಂದರೂ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲು ಸಾಧ್ಯವಾಗಿಲ್ಲ, ಈಗಾಗಲೇ ಪ್ರಾರಂಭವಾಗಿರುವ ತರಗತಿಗಳಲ್ಲಿ ಪಾಠ ಕೇಳಲು ಆಗುತ್ತಿರುವ ಮಕ್ಕಳಿಗೆ ಮನಮುಟ್ಟುವಂತೆ ಬೋಧಿಸಬೇಕು,ಕೋವಿಡ್ ಭಯದಿಂದ ಪಾಲಕರು ಹಾಗೂ ಮಕ್ಕಳಲ್ಲಿ ನಕಾರಾತ್ಮಕ ಧೋರಣೆ ಮೂಡಿದೆ.
ಈ ಕಾರಣದಿಂದ ಪಾಲಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಾರೆ, ಹೀಗಾಗಿ ಶಿಕ್ಷಕರು ಮಕ್ಕಳಲ್ಲಿ ಸಕಾರಾತ್ಮಕ ಧೋರಣೆ ಮೂಡಿಸಲು ಮುಂದಾಗಬೇಕೆಂದರು. ಈ ಕುರಿತು ಶಿಕ್ಷಕರೊಂದಿಗೆ ಮುಕ್ತವಾಗಿ ಚರ್ಚಿಸಿದರು.
ಶಿಕ್ಷಕರೂ ಕೂಡಾ ಹೊಸ ಮತ್ತು ಸುಲಭದ ಪ್ರಯೋಗಗಳ ಮೂಲಕ ಪರಿಣಾಮಕಾರಿ ಬೋಧನೆಯ ಬಗ್ಗೆ ಚರ್ಚಿಸಿದರು.ಈ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಶಿಕ್ಷಕರು , ಶಿಕ್ಷಣ ಸಂಯೋಜಕರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಶಿಕ್ಷಣ ಇಲಾಖೆಯ ಆಯುಕ್ತ ಮೇಜರ್ ಸಿದ್ದಲಿಂಗಯ್ಯ, ತಹಸೀಲ್ದಾರ್ ರೇμÁ್ಮ ತಾಳಿಕೋಟಿ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.