ಮಹದಾಯಿ ಯೋಜನೆ ಜಾರಿಯಾಗಿ ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗಿಲ್ಲ. ಕೂಡಲೇ ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಬೇಕು ಎಂದು ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ್ ಸೊಬರದಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆ ಜಾರಿ ಕುರಿತಂತೆ ರಾಜ್ಯ ಸರ್ಕಾರ ನಿರ್ಧಾರ ತಗೆದುಕೊಳ್ಳದಿರುವುದು ಖಂಡನೀಯವಾಗಿದೆ.
ತಕ್ಷಣ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ. ಮಹದಾಯಿ ಜೊತೆಗೆ ಉತ್ತರ ಕರ್ನಾಟಕಕ್ಕೆ ಒಂಬತ್ತು ಕಚೇರಿಗಳ ಸ್ಥಳಾಂತರ ಮಾಡುವುದು ಹಾಗೂ ಗಡಿ ವಿಚಾರದಲ್ಲಿ ತಗಾದೆ ತೆಗೆಯುತ್ತಿರುವ ಮಹಾರಾಷ್ಟ್ರ ಸಿಎಂಗೆ ದಿಟ್ಟ ಉತ್ತರ ನೀಡುವಂತೆ ಒತ್ತಾಯಿಸಿದರು.