ಬೆಳಗಾವಿ ತಾಲೂಕು ಮುಚ್ಚಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅನಿತಾ ಸಿದ್ದು ಒಡೆಯರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಂದೀಪ ಚಂದ್ರಕಾಂತ ಜಕ್ಕಾನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಕಾಂಗ್ರೆಸ್ ಬೆಂಬಲಿತರಾಗಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಆಯ್ಕೆ ನಡೆದಿದೆ.
ಕಾಂಗ್ರೆಸ್ ಮುಖಂಡ ಅರವಿಂದ ಅಣ್ಣಾ ಕಾರ್ಚಿ ನೇತೃತ್ವದಲ್ಲಿ ಮುಚ್ಚಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷ ಸ್ಥಾನಕ್ಕೆ ಅನಿತಾ ಸಿದ್ದು ಒಡೆಯರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಂದೀಪ ಚಂದ್ರಕಾಂತ ಜಕ್ಕಾನೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಒಟ್ಟಿನಲ್ಲಿ ಮುಚ್ಚಂಡಿ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿಗರು ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ.