Belagavi

ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಗದರ್ಶನದಲ್ಲಿ ಸುಳೇಭಾವಿ ಗ್ರಾ.ಪಂ.ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

Share

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ಮಾರ್ಗದರ್ಶನದಂತೆ ಅವಿರೋಧವಾಗಿ ಆಯ್ಕೆಯಾಗಿರುವ ಸುಳೇಬಾವಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷರನ್ನು ಕಾಂಗ್ರೆಸ್ ಮುಖಂಡ, ಲಕ್ಷ್ಮೀ ತಾಯಿ ಸೌಹಾರ್ದ ಸಹಕಾರಿ ಸಂಘದ ಚೇರ್ಮನ್ ಚನ್ನರಾಜ ಹಟ್ಟಿಹೊಳಿ ಸತ್ಕರಿಸಿದರು.

ಬುಧವಾರ ಸುಳೇಭಾವಿ ಗ್ರಾಮಕ್ಕೆ ತೆರಳಿದ ಚನ್ನರಾಜ್ ಹಟ್ಟಿಹೊಳಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಮಹೇಶ ಸುಗ್ನಣ್ಣವರ ಹಾಗೂ ಉಪಾಧ್ಯಕ್ಷರಾಗಿ ಆಯ್ಕಯಾಗಿರುವ ರತ್ನವ್ವ ಕೋಲಕಾರ ಅವರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಸನ್ಮಾನಿಸಿದರು. ಜೊತೆಗೆ ಗ್ರಾಮದ ಸಮಗ್ರ ಅಭಿವೃದ್ಧಿಯ ಕುರಿತು ಚರ್ಚಿಸಿದರು.

ಕ್ಷೇತ್ರದಲ್ಲಿ ಯಾವುದೇ ರೀತಿಯ ತಾರತಮ್ಯವಿಲ್ಲದೆ ಎಲ್ಲ ರೀತಿಯ ಅಭಿವೃದ್ಧಿ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ. ಸುಳೇಭಾವಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಕೂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಎಲ್ಲ ರೀತಿಯ ನೆರವು ನೀಡಲಿದ್ದಾರೆ. ಅವರ ಸಹಕಾರದೊದಿಗೆ ಗ್ರಾಮವನ್ನು ಮಾದರಿಯಾಗಿ ಅಭಿವೃದ್ಧಿಪಡಿಸೋಣ ಎಂದು ಚನ್ನರಾಜ ಹಟ್ಟಿಹೊಳಿ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಗಂಗಣ್ಣ ಕಲ್ಲೂರ, ಎಲ್.ಎನ್. ಕಲ್ಲೂರ, ದತ್ತಾ ಬಂಡಿಗನಿ, ಇಸ್ಮಾಯಿಲ್ ತಿಗಡಿ, ಬಸನಗೌಡ ಪಾಟೀಲ, ಇಸಾಕ್ ಜಮಾದಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

 

Tags:

error: Content is protected !!