50 ವರ್ಷ ಪೂರ್ಣಗೊಳಿಸಿದ ಶಾಲೆ ಕಟ್ಟಡಗಳ ಪುನಶ್ಚೇತನಕ್ಕೆ ಶಿಕ್ಷಣ ಇಲಾಖೆಯಿಂದ ಕಾರ್ಯಕ್ರಮ ರೂಪಿಸಲಾಗಿದೆ. ಶಾಲೆ ಕಟ್ಟಡ ಸುಧಾರಿಸಲು ಹೆಚ್ಚಿನ ಅನುದಾನ ನೀಡಲು ಯೋಜಿಸಲಾಗಿದೆ. ಇದಕ್ಕೆ ಸ್ವಯಂ ಸೇವಾ ಸಂಸ್ಥೆಗಳೂ ಸಹ ಕೈಜೋಡಿಸಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ತಿಳಿಸಿದರು.

ಖಾನಾಪುರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಸಚಿವ ಎಸ್.ಸುರೇಶಕುಮಾರ್ ಮಾತನಾಡಿ, ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡಗಳ ಅಭಿವೃದ್ಧಿಗೆ ಶಿಕ್ಷಣ ಇಲಾಖೆ ಯೋಜನೆ ರೂಪಿಸಿದೆ. ಇದಕ್ಕಾಗಿ ಬೆಂಗಳೂರು ಸೇರಿ ಹಲವೆಡೆ ಸ್ವಯಂ ಸೇವಾ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಮುಂದೆ ಬಂದಿದ್ದಾರೆ. ಸರಕಾರಿ ಶಾಲೆಗಳ ಕಟ್ಟಡಗಳನ್ನು ಸುಧಾರಿಸಲು ನೆರವಾಗಿದ್ದಾರೆ. ಹಣಕಾಸಿನ ಲಭ್ಯತೆ ಆಧರಿಸಿ ಶಿಕ್ಷಣ ಇಲಾಖೆ ಸಹ ಶಾಲೆ ಕಟ್ಟಡಗಳ ಸುಧಾರಣೆಗೆ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಇನ್ನು ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಶಿಕ್ಷಕರು ಶಾಲೆಗೆ ಹೋಗುವಾಗ ಪೂರ್ವ ಸಿದ್ಧತೆಯೊಂದಿಗೆ ಹೋಗಬೇಕು ಎಂದು ಸೂಚಿಸಲಾಗಿದೆ. ಮಕ್ಕಳು ಯಾವ ವಿಷಯದಲ್ಲಿ ದುರ್ಬಲರಿದ್ದಾರೆ ಎಂದು ಗುರುತಿಸಿ ವಿಶೇಷ ಶಿಕ್ಷಣ ನೀಡಲು ಶಿಕ್ಷಣಾಧಿಕಾರಿಗಳಿಗೆ ತಿಳಿಸಲಾಗಿದೆ. ¨ ಖಾಸಗಿ ಮತ್ತು ಸರಕಾರಿ ಶಾಲೆಗಳನ್ನು ತುಲನೆ ಮಾಡುವಾಗ ಬೋಧನಾ ಸಾಮಥ್ರ್ಯ, ಕಲಿಕಾ ಸಾಮಥ್ರ್ಯ ಗಮನಿಸಬೇಕು. ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣದಲ್ಲಿ ಯಾವುದರಲ್ಲೂ ಕಡಿಮೆ ಇಲ್ಲ. ಶಿಕ್ಷಕರು ಸಮರ್ಥರಿದ್ದಾರೆ. ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡಲು ಬದ್ಧವಾಗಿವೆ ಎಂದರು.