hubbali

ಶೃಂಗೇರಿ ಪಟ್ಟಣದಲ್ಲಿ ನಡೆದ ಬಾಲಕಿ ಅತ್ಯಾಚಾರಿಗಳಿಗೆ ಗಲ್ಲು ಜರುಗಿಸಲು ಆಗ್ರಹಿಸಿ ಪ್ರತಿಭಟನೆ

Share

ಶೃಂಗೇರಿ ಪಟ್ಟಣದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಿಗಳಿಗೆ ಕೂಡಲೇ ಕಠಿಣ ಕಾನೂನು ಕ್ರಮ ಜರೂಗಿಸಲು ಆಗ್ರಹಿಸಿ ಸರ್ವ ಧರ್ಮ ಸ್ವಯಂ ಸೇವಕರು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ತಹಶಿಲ್ದಾರರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಶೃಂಗೇರಿಯ ಪಟ್ಟಣದಲ್ಲಿ ನಡೆದಿರುವ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಿಗಳಿಗೆ ಕಠಿಣವಾದ ಕಾನೂನು ಕ್ರಮ ಜರೂಗಿಸಬೇಕು ಉಳಿದ ಅಪರಾಧಿಗಳನ್ನು ಬಂಧಿಸಬೇಕು ಹಾಗೂ ನಿವಾತ ತನಿಖೆ ಆಗಬೇಕು ಹಾಗೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಆಗಿರುವ ಗ್ಯಾಂಗ್ ರೇಪ್ ಅತ್ಯಾಚಾರ ಪ್ರಕರಣದ ಇನ್ನೂ ಕರ್ನಾಟಕ ರಾಜ್ಯದ ಜನರು ಮರೆತಿಲ್ಲ ಹೀಗಾಗಿ ಕರ್ನಾಟಕ ರಾಜ್ಯದಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಇಲ್ಲದಂತೆ ಭಯದ ವಾತಾವರಣ ಸೃಷ್ಟಿಸುತ್ತದೆ ಶಾಲಾ ಕಾಲೇಜು ಬಾಲಕಿಯ ಹೆಣ್ಣು ಮಕ್ಕಳ ಸುರಕ್ಷತೆಯ ರಕ್ಷಣೆಗಾಗಿ ಒದಗಿಸಲು ಸಮಾಜ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕು ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗಬೇಕು ಆಗ್ರಹಿಸಿದರು.

Tags:

error: Content is protected !!