ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಚುನಾವಣೆಯಿಂದ ಆಯ್ಕೆಯಾದ್ರೆ, ಉಪಾಧ್ಯಕ್ಷ ಸ್ಥಾನವನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಸಂತಿಬಸ್ತವಾಡ ಗ್ರಾ.ಪಂ.ಅಧ್ಯಕ್ಷರಾಗಿ ವಿಠಲ ರಾಮಲಿಂಗ ಅಂಕಲಗಿ 8 ಮತಗಳ ಅಂತರದಿಂದ ಆಯ್ಕೆಯಾದ್ರೆ, ಉಪಾಧ್ಯಕ್ಷರಾಗಿ ಮಹಾದೇವಿ ಬಾಳು ನಾಯಕ ಅವಿರೋಧವಾಗಿ ಆಯ್ಕೆಯಾದರು. ಈ ಕುರಿತು ಚುನಾವಣಾ ಅಧಿಕಾರಿ ಜಗನ್ನಾಥ ಜಂಗಮಶೆಟ್ಟಿ ಅವರು ಘೋಷಣೆ ಮಾಡುತ್ತಿದ್ದಂತೆ ಅಭಿಮಾನಿಗಳು ಪಟಾಕಿ ಹಚ್ಚಿ, ಸಿಹಿ ಹಂಚಿ ಗುಲಾಲು ಎರಚಿ ಸಂಭ್ರಮಿಸಿದರು.
ಈ ವೇಳೆ ಪಿಡಿಓ ಸಂಜಯ್ ಚನ್ನನ್ನವರ, ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.