Banglore

ಸಾರಿಗೆ ನೌಕರರ ಮುಷ್ಕರದಿಂದ ಬಸ್ ಸಂಚಾರಕ್ಕೆ ಬಾಧೆಯಿಲ್ಲ: ಡಿಸಿಎಂ ಲಕ್ಷ್ಮಣ ಸವದಿ

Share

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಸಾರಿಗೆ ಸಿಬ್ಬಂದಿ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದರೆ ಈ ಸಂಬಂಧ ಸ್ಪಷ್ಟನೆ ನೀಡಿರುವ ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ, ನಾಳೆ ಸಾರಿಗೆ ಸಿಬ್ಬಂದಿಗಳು ನಡೆಸುವ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿಯಾಗಲ್ಲ. ಸಾರಿಗೆ ಸಂಚಾರ ಯಥಾಸ್ಥಿತಿಯಲ್ಲಿ ಇರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ನಾಳೆ ಸಾರಿಗೆ ಸಿಬ್ಬಂದಿ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದರೆ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಈ ಬಗ್ಗೆ ಜನರಲ್ಲಿ ಗೊಂದಲ ಬೇಡ ಎಂದರು.

ಇನ್ನು ಸಾರಿಗೆ ಸಿಬ್ಬಂದಿಗಳ ವೇತನ ತಾರತಮ್ಯವನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು. ಅವರ ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಲಕ್ಷ್ಮಣ ಸವದಿ ಭರವಸೆ ನೀಡಿದರು.

ಒಟ್ಟಿನಲ್ಲಿ ಸಾರಿಗೆ ಸಂಸ್ಥೆಯ ನೌಕರರ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

 

Tags:

error: Content is protected !!