ಬೆಳಗಾವಿ: ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಯುವ ಜನಾಂಗದವರಿಗೆ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಿ ಪ್ರಾರಂಭಿಕ ಹಂತದಲ್ಲಿಯೇ ಪರೀಕ್ಷಿಸಿಕೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಅರುಣ ಕಟಾಂಬಳೆ ಅವರು ಕರೆ ನೀಡಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿಯಂತ್ರಣ ವಿಭಾಗ, ತಾಲೂಕಾ ಪಂಚಾಯತ ಕಚೇರಿಯ ತಾಲೂಕಾ ಆರೋಗ್ಯಾಧಿಕಾರಿಗಳು, ಉಚಗಾಂವ ಗ್ರಾಮ ಪಂಚಾಯತ ಬೆಕ್ಕಿನಕೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಸೋಮವಾರ ಬೆಳಗಾವಿ ತಾಲೂಕಿನ ಬೆಕ್ಕಿನಕೇರಿ ಗ್ರಾಮದ ವಿಠ್ಠಲ ರುಕ್ಮಾಯಿ ದೇವಾಲಯದಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ ಅಂಗವಾಗಿ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಡಾ.ಚಾಂದಿನಿ ಜಿ. ದೇವಡಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳು ಬೆಳಗಾವಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಕುಷ್ಠರೋಗ ವಿರುದ್ಧ ಅಂತಿಮ ಯುದ್ಧ ಆರಂಭವಾಗಿದ್ದು ಈ ಜಾಗೃತಿ ಅಭಿಯಾನದಲ್ಲಿ ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ ಮಾಡಿದರು.
ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಮಲ್ಲಿಕಾರ್ಜುನ ಕಲಾದಗಿ, ಬೆಕ್ಕಿನಕೇರಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಸ್ಮಿಥಾ ಚಂದರಗಿ ಉಚಗಾಂವ ಗ್ರಾಮದ ವೈದ್ಯಾಧಿಕಾರಿಗಳು ಪ್ರಾ.ಆ.ಕೇಂದ್ರ ಡಾ.ಸ್ಮಿಥಾ ಗೋಡಸೆ ಉಪಧ್ಯಾಕ್ಷರು ಹಾಗೂ ಸದಸ್ಯರು ಗಂಗುಬಾಯಿ ನಾಗೋಜಿ ಗಾವಡೆ ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಸರ್ಕಾರಿ ಪ್ರೌಢಶಾಲೆ ಬೆಕ್ಕಿನಕೇರಿಯ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು, ಕ್ಷೇತ್ರ ಆರೋಗ್ಯ ಉಚಗಾಂವ ಪ್ರಾ.ಆ.ಕೇಂದ್ರದ ಶಿಕ್ಷಣಾಧಿಕಾರಿಗಳು ಬಿ.ಪಿ.ಯಲಿಗಾರ ಇವರು ಸ್ವಾಗತಿಸಿದರು.
ಸಿ.ಜಿ.ಅಗ್ನಿಹೊತ್ರಿ ಕಾರ್ಯಕ್ರಮ ನಿರೂಪಿಸಿದರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಕವಿತಾ ಕುಂಬಾರ ವಂದಿಸಿದರು ಕಾರ್ಯಕ್ರಮದಲ್ಲಿ ಬೆಕ್ಕಿನಕೇರಿ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಯವರು, ಖಾಸಗಿ ವೈದ್ಯರು, ಶಿಕ್ಷಕರು ವಿದ್ಯಾರ್ಥಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.