Belagavi

ಸೇವಾ ಭದ್ರತೆ, ಕನಿಷ್ಠ ವೇತನ ಸೇರಿ 9 ಬೇಡಿಕೆ ಮುಂದಿರಿಸಿ ಗ್ರಾ.ಪಂ, ತಾ.ಪಂ.ಅಂಗವಿಕಲರ ನೌಕರರರಿಂದ ಪ್ರತಿಭಟನೆ

Share

ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಂಗವಿಕಲರ ನೌಕರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮೂಲಸೌಕರ್ಯ ಸೇವಾ ಭದ್ರತೆ, ಕನಿಷ್ಠ ವೇತನ ಸೇರಿ 9 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಂಗವಿಕಲರ ನೌಕರರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ತಂಡೋಪತಂಡವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಂಗವಿಕಲ ನೌಕರರ ಸಂಘಟನೆಯ ಮುಖಂಡರು, ಕಾರ್ಯಕರ್ತರು, ತಮ್ಮ ಬೇಡಿಕೆ ಈಡೇರಿಸಬೇಕು ಎಂದು ಘೋಷಣೆ ಮೊಳಗಿಸಿದರು. ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಅಂಗವಿಕಲರ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಫಕೀರಗೌಡ ಪಾಟೀಲ ಮಾತನಾಡಿ, ಕಾಯಂಮಾತಿ, ಕನಿಷ್ಠ ವೇತನ, ಹೆರಿಗೆ ರಜೆ, ಸ್ವಯಂ ವರ್ಗಾವಣೆಗೆ ಅವಕಾಶ ಸೇರಿ 9 ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಸರಕಾರದ ಗಮನ ಸೆಳೆದಿದ್ದೇವೆ. ಈ ಮುಖ್ಯಮಂತ್ರಿಯವರಿಗೂ ಮನವಿ ಪತ್ರ ರವಾನಿಸಿದ್ದೇವೆ. ಹಲವು ಬೇಡಿಕೆಗಳನ್ನು ಸ್ಥಳೀಯ ಮಟ್ಟದಲ್ಲೇ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಉಳಿದ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಜಿಲ್ಲಾ ಅಂಗವಿಕಲ ನೌಕರರ ಸಂಘದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.

Tags:

error: Content is protected !!