ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಹಿರೇಬಾಗೇವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸ್ವಾತಿ ಅಡಿವೇಶ ಇಟಗಿ ಹಾಗೂ ಉಪಾಧ್ಯಕ್ಷರಾಗಿ ನಜರಿನ್ ಇಮ್ತಿಯಾಜ್ ಕರಿದಾವಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ.ಪಾಟೀಲ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರೆಲ್ಲರೂ ಸೇರಿ ಸತ್ಕರಿಸಿದರು. ಇದೇ ವೇಳೆ ಮುಖಂಡರು ಗ್ರಾಮದ ಅಭಿವೃದ್ಧಿ ಕುರಿತು ನೂತನ ಅಧ್ಯಕ್ಷ- ಉಪಾಧ್ಯಕ್ಷರೊಂದಿಗೆ ಚರ್ಚಿಸಿ, ಸಲಹೆ ಸೂಚನೆ ನೀಡಿದರು. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಈಗಾಗಲೆ ಕ್ಷೇತ್ರವನ್ನು ಮಾದರಿಯಾಗಿಸುವತ್ತ ಮುನ್ನಡೆದಿದ್ದಾರೆ. ಹಾಗಾಗಿ ಅಭಿವೃದ್ದಿಗೆ ಅವರ ಸಹಕಾರ ಹಾಗೂ ಮಾರ್ಗದರ್ಶನ ಯಾವತ್ತೂ ಇರುತ್ತದೆ ಎಂದು ಚನ್ನರಾಜ ಹಟ್ಟಿಹೊಳಿ ಹಾಗೂ ಸಿ.ಸಿ.ಪಾಟೀಲ ಭರವಸೆ ನೀಡಿದರು.